ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿದರು.
ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇದರಿಂದ ರಾಜ್ಯದ ಅನೇಕ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಯುವನಿಧಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಗೃಹಲಕ್ಷ್ಮಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ , ಯೋಜನೆಗಳು ಮುಂದುವರೆಯಲಿದೆ ಎಂದು ಹೇಳಿದರು.
ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಕೆಲವರು ಹೇಳುತ್ತಿದ್ದಾರೆ, ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಿ ನಾವು ಸಾಧಿಸಿ ತೋರಿಸುತ್ತೇವೆ ಎಂದು ಹೇಳಿದರು. ಪ್ರಾದೇಶಿಕ ಅಸಮತೋಲನ ನಿವಾರಿಸಲು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ಅನುದಾನ ನೀಡಲಾಗಿದೆ. ಕಳೆದ 77 ವರ್ಷಗಳಲ್ಲಿ ಕರ್ನಾಟಕ ಮಹತ್ವದ ಪಾತ್ರ ಹೊಂದಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ. ಆರ್ಥಿಕ ಬೆಳವಣಿಗೆ ಮೂಲಕ ರಾಜ್ಯ ಸರ್ವಜನಾಂಗದ ಶಾಂತಿಯ ತೋಟವಾಗಿದೆ ಎಂದರು.