ಮಂಡ್ಯ : ಮಂಡ್ಯದಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ಬಂಧನದ ವೇಳೆ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಪಾಲಹಳ್ಳಿ ರೌಡಿಶೀಟರ್ ಸುಪ್ರೀತ್ ಅಲಿಯಾಸ್ ಸುಪ್ಪಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಪ್ರಮೋದ್ ನನ್ನು ಬಂಧಿಸಲು ಹೋದಾಗ ಪಿಸಿ ಶರತ್ ಮೇಲೆ ಆರೋಪಿ ಪ್ರಮೋದ್ ಹಲ್ಲೆಗೆ ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಆರೋಪಿ ಪ್ರಮೋದ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೆ ಆರ್ ಎಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪುನೀತ್ ಗುಂಡು ಹಾರಿಸಿದ್ದು, ಗಾಯಗೊಂಡ ಆರೋಪಿ ಪ್ರಮೋದ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.