ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಂಡ್ಯದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವೆಂಕಟರಮಣೇಗೌಡ (ಅಲಿಯಾಸ್ ‘ಸ್ಟಾರ್’ ಚಂದ್ರು) ವಿರುದ್ಧ 2,84,620 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಇದಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ಬಿ ಮಹತಾಬ್ ಅವರು ಹೊಸ ಸದನದ ಸದಸ್ಯರಾಗಿ ಮತ್ತು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಪಿಎಂ ಮೋದಿ ಮತ್ತು ಇತರ ಪ್ರಮುಖ ಕ್ಯಾಬಿನೆಟ್ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಿದರು.