ಚೆನ್ನೈ : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಯಶಸ್ವಿಯಾಗಿ 3 ನೇ ಬಾರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನುರಿತ ವೈದ್ಯರಿಂದ ಸತತ 2 ಗಂಟೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಹೆಚ್ಡಿಕೆ ಅವರು ಈ ಮೂಲಕ 3 ನೇ ಬಾರಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಆಗಿದೆ ದೇವೇಗೌಡ, ಚನ್ನಮ್ಮ ಅವರ ಆಶೀರ್ವಾದ ಹಾಗೂ ಅಭಿಮಾನಿಗಳ ಪ್ರಾರ್ಥನೆಯಿಂದ ಹೆಚ್ಡಿಕೆ ಆಪರೇಷನ್ ಯಶಸ್ವಿಯಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಕುಮಾರಣ್ಣ ವಾಪಸ್ ಆಗಲಿದ್ದಾರೆ. ಮಾರ್ಚ್ 25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ಹೇಳಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳು ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದರು.