ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಇದರ ಜೊತೆಗೆ H3N2 ಆತಂಕವೂ ಕಾಡುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಹತ್ವದ ಸಭೆ ನಡೆಸಿದ್ದು, ಸಭೆಯ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ್ದಾರೆ.
H3N2 ಕುರಿತು ಗಾಬರಿ ಬೇಡ ಎಂದು ಹೇಳಿದ ಆರೋಗ್ಯ ಸಚಿವರು, ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಗರ್ಭಿಣಿಯರು, ಮಕ್ಕಳು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ ಸಚಿವ ಸುಧಾಕರ್, ಕೊರೋನಾ ಹಾಗೂ H3N2 ಹೆಚ್ಚಳದ ಹಿನ್ನೆಲೆಯಲ್ಲಿ ಇಂದು ಸಭೆ ಕರೆಯಲಾಗಿತ್ತು ಎಂದು ಹೇಳಿದ್ದಾರೆ.
ಇಂದಿನಿಂದಲೇ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳಿದ ಸಚಿವರು, ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವವರಿಗೂ ಇದು ಅನ್ವಯಿಸುತ್ತದೆ ಎಂದಿದ್ದಾರೆ.