ಬೆಂಗಳೂರು : ರಾಜ್ಯದಲ್ಲಿ ‘ಹಮಾರೆ ಬಾರಾ’ ಚಿತ್ರದ ಬಿಡುಗಡೆ ಅಥವಾ ಪ್ರಸಾರವನ್ನು ಎರಡು ವಾರಗಳವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೆ ಕರ್ನಾಟಕ ಸರ್ಕಾರ ನಿಷೇಧಿಸಿದೆ.
ಕರ್ನಾಟಕ ಸಿನೆಮಾ ನಿಯಂತ್ರಣ ಕಾಯ್ದೆ 1964, ಸೆಕ್ಷನ್ 15(1) ಮತ್ತು 15(5)ರ ಪ್ರಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ‘ಹಮಾರೆ ಬಾರಾ’ ಬಿಡುಗಡೆಯು ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುತ್ತದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ.
ಹಲವಾರು ಅಲ್ಪಸಂಖ್ಯಾತ ಸಂಘಟನೆಗಳು ಮತ್ತು ನಿಯೋಗಗಳ ಮನವಿ ಪರಿಗಣಿಸಿದ ನಂತರ ಮತ್ತು ಟ್ರೈಲರ್ ನೋಡಿದ ನಂತರ ಕರ್ನಾಟಕ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ರೆ, ಕರ್ನಾಟಕದಲ್ಲಿಇಂದು (ಜೂನ್ 07) ಹಮಾರೆ ಬಾರಾ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ, ಈ ಸಿನಿಮಾದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದಿನ ಆದೇಶದ ವರೆಗೂ ಪ್ರದರ್ಶನಕ್ಕೆ ತಡೆ ನೀಡಿದೆ.