ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದಲ್ಲಿ ನಡೆದಿದೆ.
ಫೈನಾನ್ಸಿನಲ್ಲಿ ಸಾಲ ಪಡೆದಿದ್ದ ಮಹಿಳೆಯೊಬ್ಬರು ಸಾಲಗಾರರ ಕಿರುಕುಳ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಮನಗರದ ಯಶೋಧಮ್ಮ (60) ಎಂಬ ಮಹಿಳೆ ನೇಣಿಗೆ ಶರಣಾಗಿದ್ದಾರೆ. ಖಾಸಗಿ ಫೈನಾನ್ಸ್ ಕಂಪನಿಗಳಲ್ಲಿ ಯಶೋಧಮ್ಮ 5 ಲಕ್ಷ ರೂ ಸಾಲ ಪಡೆದಿದ್ದರು. ಆದರೆ ಸಾಲದ ಕಂತು ಕಟ್ಟಲು ಆಗಿರಲಿಲ್ಲ. ಈ ಹಿನ್ನೆಲೆ ಸಿಬ್ಬಂದಿಗಳು ಮನೆ ಬಳಿ ಬಂದು ಗಲಾಟೆ ಮಾಡಿದ್ದು, ಇದರಿಂದ ಮನನೊಂದು ಯಶೋಧಮ್ಮ ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾನೂನು ರೀತಿ ಕ್ರಮ
ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ @siddaramaiah ಅವರು ತಿಳಿಸಿದ್ದಾರೆ. pic.twitter.com/vHrY8mCBnq
— DIPR Karnataka (@KarnatakaVarthe) January 20, 2025