ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ದೇಶದಲ್ಲಿ ಹಿಂಸಾತ್ಮಕ ಮಾರಣಾಂತಿಕ ಪ್ರತಿಭಟನೆಗಳ ನಡುವೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಭಾರತಕ್ಕೆ ಆಗಮಿಸಿದ್ದಾರೆ.
ಸ್ಥಳೀಯ ಕಾಲಮಾನ 2:30 ರ ಸುಮಾರಿಗೆ ಮಿಲಿಟರಿ ಹೆಲಿಕಾಪ್ಟರ್ ಮೂಲಕ ಬಾಂಗ್ಲಾದೇಶದಿಂದ ಭಾರತಕ್ಕೆ ಹೊರಟ ಹಸೀನಾ ಸೋಮವಾರ ತ್ರಿಪುರಾದ ರಾಜಧಾನಿ ಅಗರ್ತಲಾಕ್ಕೆ ಬಂದಿಳಿದರು. ಆದರೆ ಹಸೀನಾ ಭಾರತಕ್ಕೆ ಆಗಮಿಸುವ ಬಗ್ಗೆ ಯಾವುದೇ ಅಧಿಕೃತ ದಢೀಕರಣವಿಲ್ಲ. ಅವರು ತಮ್ಮ ಸಹೋದರಿಯೊಂದಿಗೆ ಹೆಲಿಕಾಪ್ಟರ್ ನಲ್ಲಿ ಢಾಕಾ ಅರಮನೆಯಿಂದ ಹೊರಟರು ಎಂದು ಮಾಧ್ಯಮ ಮೂಲಗಳು ತಿಳಿಸಿದೆ.
1971 ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಅನುಭವಿಗಳ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 30 ರಷ್ಟು ಕಾಯ್ದಿರಿಸಿದ ವಿವಾದಾತ್ಮಕ ಕೋಟಾ ವ್ಯವಸ್ಥೆಯ ವಿರುದ್ಧ ಭಾರಿ ಪ್ರತಿಭಟನೆಯ ನಂತರ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಬೇಕಾಯಿತು ಎಂದು ಸ್ಥಳೀಯ ಮಾಧ್ಯಮ ವರದಿಗಳು ಸೂಚಿಸಿದೆ.