ಬೆಂಗಳೂರು : ಬೆಂಗಳೂರಿನಲ್ಲಿ 22 ವರ್ಷದ ಟೆಕ್ಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ಮೂಲದ 22 ವರ್ಷದ ಯಾಜ್ಞಿಕ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ನಡೆದಿದೆ. ಬೆಂಗಳೂರಿನ ಪ್ರತಿಷ್ಟಿತ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಯಾಜ್ಜಿಕ್ ಬಾಡಿಗೆ ರೂಂ ಒಂದರಲ್ಲಿ ತಂಗಿದ್ದರು ಎನ್ನಲಾಗಿದೆ.
ಬಲೂನಿಗೆ ತುಂಬುವ ಹೀಲಿಯಂ ಗ್ಯಾಸ್ ಬಳಸಿಕೊಂಡು ಈತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.