ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ನಡೆದ ಹತ್ರಾಸ್ ಕಾಲ್ತುಳಿತ ದುರಂತದ ತನಿಖೆಯನ್ನು ಎಸ್ಐಟಿ ಗೆ ನೀಡಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.
ನಾವು ಆಗ್ರಾ ಎಡಿಜಿ ನೇತೃತ್ವದಲ್ಲಿ ಎಸ್ಐಟಿ ರಚಿಸಿದ್ದೇವೆ. ಇದು ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಈ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಅವರಿಗೆ ತಿಳಿಸಲಾಗಿದೆ. ತನಿಖೆ ಮಾಡಬೇಕಾದ ಹಲವಾರು ಕೋನಗಳಿವೆ … ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಡಳಿತ ಮತ್ತು ಪೊಲೀಸ್ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳು ಸಹ ಇದರ ಭಾಗವಾಗಲಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ರಕ್ಷಣಾ ಮತ್ತು ಕಾರ್ಯಾಚರಣೆಯ ಮೇಲೆ ಕೇಂದ್ರೀಕರಿಸುವುದು ನಮ್ಮ ಆದ್ಯತೆಯಾಗಿತ್ತು. ಒಟ್ಟು 121 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಅವರು ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಬಂದವರು. ಮೃತಪಟ್ಟ 121 ಮಂದಿಯಲ್ಲಿ 6 ಮಂದಿ ಹೊರರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಗಾಯಗೊಂಡ 31 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಬಹುತೇಕ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.