ಬೆಂಗಳೂರು : ರಾಜ್ಯದಲ್ಲಿ ಕಾವೇರಿ ನೀರಿನ ವಿವಾದ ಭುಗಿಲೆದ್ದಿದ್ದು, ಕಾವೇರಿ ವಿವಾದವನ್ನು ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ.
ಕಾವೇರಿ ನೀರಿನ ಸಂಬಂಧ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ ಮಳೆ ಇಲ್ಲದೇ ನೀರಿನ ಕೊರತೆ ಉಂಟಾಗಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶಿಸಿ ಕಾವೇರಿ ವಿವಾದವನ್ನು ಬಗೆಹರಿಸಬೇಕು ಎಂದು ಹೆಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಸೆಪ್ಟೆಂಬರ್ 26 ರ ನಾಳೆ ಬೆಂಗಳೂರು ಬಂದ್ ಹಾಗೂ ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಹಲವಡೆ ರೈತರು, ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.