ನವದೆಹಲಿ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್ ಗೆ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಫಿಕ್ಸ್ ಆಗಿದೆ ಎಂದು ಹೇಳಲಾಗಿದೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆ ದಿಢೀರ್ ದೆಹಲಿಗೆ ತೆರಳಿದ್ದು ಕುಮಾರಸ್ವಾಮಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಸೀಟು ಹಂಚಿಕೆ ಫೈನಲ್ ಆಗಿರಲಿಲ್ಲ.
ಜೆಡಿಎಸ್ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಆರು ಕ್ಷೇತ್ರಗಳ ಬೇಡಿಕೆ ಇಟ್ಟಿತ್ತು. ಇದೀಗ ಮಂಡ್ಯ, ಹಾಸನ, ಕೋಲಾರ ಜೆಡಿಎಸ್ ಗೆ ಫಿಕ್ಸ್ ಆಗಿದ ಎನ್ನಲಾಗಿದ್ದು, ಉಳಿದ ಕ್ಷೇತ್ರಗಳ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಹೈಕಮಾಂಡ್ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.