ಬೆಂಗಳೂರು : ಮುಡಾ ಹಗರಣ ಸಂಬಂಧ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2:30 ಕ್ಕೆ ಮುಂದೂಡಿಕೆ ಮಾಡಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಇಂದು ವಾದ ವಿವಾದಗಳನ್ನು ಆಲಿಸಿ ಇದೀಗ ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2:30 ಕ್ಕೆ ಮುಂದೂಡಿಕೆ ಮಾಡಿದೆ. ಇಂದೇ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗುವ ಸಾಧ್ಯತೆಯಿದೆ.