ಬೆಳಗಾವಿ: ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಶಾರದ , ಇಬ್ಬರು ಮಕ್ಕಳಾದ ಅಮೃತ, ಆದರ್ಶ ಮೃತಪಟ್ಟಿದ್ದಾರೆ.ಅನುಷ್ಕಾ ಡಾಲೆಯನ್ನು ರಕ್ಷಿಸಲಾಗಿದೆ ಎಂದು ಹೇಳಲಾಗಿದೆ.
ದಿನನಿತ್ಯ ಕುಡಿದು ಬರುತ್ತಿದ್ದ ಪತಿ ಕಿರುಕುಳಕ್ಕೆ ಬೇಸತ್ತು ತಾಯಿ ತನ್ನ ಮಕ್ಕಳ ಜೊತೆ ಕೃಷ್ಣಾ ನದಿಗೆ ಹಾರಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಪತಿ ಅಶೋಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಪ್ರತಿನಿತ್ಯ ಅಶೋಕ ಡಾಲೆ ಕುಡಿದು ಬಂದು ಗಲಾಟೆ ಮಾಡುತ್ತಿದ್ದನು. ಪತಿಯ ಹಿಂಸೆ ತಾಳಲಾರದೇ ಪತ್ನಿ ಶಾರದಾ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.