ಉಡುಪಿ : ಯಕೃತ್ ದಾನ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಅರ್ಚನಾ ಕಾಮತ್ (34) ಎಂದು ಗುರುತಿಸಲಾಗಿದೆ. ಉಡುಜಿ ಜಿಲ್ಲೆ ಕುಂದಾಪುರದ ಕೋಟೇಶ್ವರದಲ್ಲಿ ಈ ಘಟನೆ ನಡೆದಿದೆ.
69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿ ಅವಶ್ಯವಿದ್ದ ಕಾರಣ ಅರ್ಚನಾ ಕಾಮತ್ ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅರ್ಚನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.