ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಟೋ ಚಾಲಕನೋರ್ವ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂಬುದು ತಿಳಿದು ಬಂದಿದೆ.
ಫೆ.20 ರಂದು ಮುಂಜಾನೆ ಮಹಿಳೆ ಆಟೋ ಹತ್ತಿದ್ದು, ನಂತರ ಆಟೋ ಚಾಲಕ ಮುಬಾರಕ್ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ವೇಳೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಮುಬಾರಕ್ ನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಡಬಲ್ ರಸ್ತೆಯ ಬಳಿ ಕಟ್ಟಡವೊಂದರಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಮೊದಲು ಇದು ಕೊಲೆಯೋ..? ಆತ್ಮಹತ್ಯೆಯೋ ತಿಳಿದು ಬಂದಿರಲಿಲ್ಲ. ನಂತರ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿದಾಗ ಅತ್ಯಾಚಾರ ಎಸಗಿರುವುದು ಧೃಡವಾಗಿದೆ.