ತುಮಕೂರು : ತುಮಕೂರಿನ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ಶಾಲೆಯಲ್ಲಿ ಹೆಜ್ಜೇನು ದಾಳಿ ನಡೆಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಮಕ್ಕಳು ಆಟವಾಡುತ್ತಿದ್ದ ವೇಳೆ 20 ಕ್ಕೂ ಹೆಚ್ಚು ಮಕ್ಕಳ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಪರಿಣಾಮ ಮಕ್ಕಳ ಕುತ್ತಿಗೆ ಹಾಗೂ ಮುಖಗಳಿಗೆ ಗಾಯಗಳಾಗಿದ್ದು, ಶಿರಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಕ್ಕಳು ಜೇನಿಗೆ ಕಲ್ಲು ಹೊಡೆದಿದ್ದಾರಾ..? ಎಂಬುದು ಗೊತ್ತಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.