ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ.
ಈ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನಾಗೇಂದ್ರ ಅವರಿಗೆ ನೋಟಿಸ್ ನೀಡಿದ್ದು, ಪ್ರಕರಣದ ಅರ್ಜಿ ವಿಚಾರಣೆಯನ್ನು ನ.15 ಕ್ಕೆ ಮುಂದೂಡಿದೆ.
ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಜುಲೈ 12ರಂದು ಇಡಿ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ಲಕ್ಷ ಬಾಂಡ್ , ಇಬ್ಬರ ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಸೇರಿದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ.