alex Certify BREAKING : ಗಣರಾಜ್ಯೋತ್ಸವದಲ್ಲಿ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಭಾಷಣದ ಹೈಲೆಟ್ಸ್ ಹೀಗಿದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗಣರಾಜ್ಯೋತ್ಸವದಲ್ಲಿ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಭಾಷಣದ ಹೈಲೆಟ್ಸ್ ಹೀಗಿದೆ

ಬೆಂಗಳೂರು : ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬಹಳ ಸಂಭ್ರಮದಿಂದ 75 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯಪಾಲರಿಂದ ಧ್ವಜಾರೋಹಣ ನೆರವೇರಿದೆ.

ನಂತರ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ ಎಂದರು.
ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಪರಿಹಾರ ಕೈಗೊಳ್ಳಲಾಗಿದೆ. ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ. SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ರಾಜ್ಯಪಾಲ ಗೆಹ್ಲೋಟ್ ತಿಳಿಸಿದರು.ಪ. ಜಾತಿಯ 69,190 ವಿದ್ಯಾರ್ಥಿಗಳಿಗೆ 133.82 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗಿದೆ ಎಂದರು.

ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧನೆ, ಭಾರತ ಸಂವಿಧಾನ ಪೀಠಿಕೆ ಫೋಟೋ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. 72.38 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ರಾಜ್ಯದಲ್ಲಿರುವ ಡಯಾಲಿಸಿಸ್ ಕೇಂದ್ರಗಳ ವಿಸ್ತರಣೆ ಮಾಡಲಾಗಿದೆ. ಆರೋಗ್ಯ ಕವಚ ಯೋಜನೆಯಡಿ ಹೊಸದಾಗಿ 262 ಆ್ಯಂಬುಲೆನ್ಸ್ಗಳು ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗಿದೆ. 168 ಇದ್ದ ಡಯಾಲಿಸಿಸ್ ಕೇಂದ್ರ 219ಕ್ಕೆ ಹೆಚ್ಚಳವಾಗಿದೆ. 63.13 ಲಕ್ಷ ಜನರಿಗೆ ಕೆಲಸವನ್ನ ನೀಡಲಾಗಿದೆ. 72.38 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...