alex Certify BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಚಿಕಿತ್ಸೆ ಫಲಿಸದೇ 6 ವರ್ಷದ ಮಗು ಸಾವು, ಸಾವಿನ ಸಂಖ್ಯೆ 3 ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಚಿಕಿತ್ಸೆ ಫಲಿಸದೇ 6 ವರ್ಷದ ಮಗು ಸಾವು, ಸಾವಿನ ಸಂಖ್ಯೆ 3 ಕ್ಕೇರಿಕೆ

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ವರ್ಷದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 6 ವರ್ಷದ ಬಾಲಕಿ ಪ್ರಣವಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ತಾಯಿ, ಮಗು ಸಜೀವ ದಹನವಾಗಿದ್ದರು. ಪತಿ ಹಾಗೂ ಇನ್ನೊಂದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ 6 ವರ್ಷದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...