ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಂಟೈನರ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ 20 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.
ಮಂಡ್ಯದ ಸಾಂಜೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಬಸ್ ಕಂಟೈನರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ 20 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಂತಿದ್ದ ಕಂಟೈನರ್ ಗೆ ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಚಾಲಕ ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.ಅವೈಜ್ಞಾನಿಕ ರಸ್ತೆಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಕಿಟಕಿ ಗಾಜು ಒಡೆದು ಪ್ರಯಾಣಿಕರನ್ನು ರಕ್ಷಿಸಲಾಗಿದೆ. 20 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದೆ