alex Certify BREAKING : ಮಹಾರಾಷ್ಟ್ರದ ಗ್ಲೌಸ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ : 6 ಮಂದಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಹಾರಾಷ್ಟ್ರದ ಗ್ಲೌಸ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ : 6 ಮಂದಿ ಸಜೀವ ದಹನ

ಮಹಾರಾಷ್ಟ್ರ : ವರ್ಷದ ಕೊನೆಯ ದಿನದಂದು, ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಪ್ರದೇಶದ ಹ್ಯಾಂಡ್ ಗ್ಲೌಸ್  ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 6 ಮಂದಿ ಸಜೀವ ದಹನವಾಗಿದ್ದಾರೆ.

ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳ ಪ್ರಕಾರ, ವಾಲುಜ್ ಎಂಐಡಿಸಿ ಪ್ರದೇಶದ ಕಾರ್ಖಾನೆಯಲ್ಲಿ ಮುಂಜಾನೆ 02: 15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಪ್ರದೇಶದ ಹ್ಯಾಂಡ್ಸ್ ಗ್ಲೋವ್ ತಯಾರಿಕಾ ಕಂಪನಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. “ನಮಗೆ ಮುಂಜಾನೆ 2:15 ಕ್ಕೆ ಕರೆ ಬಂತು. ನಾವು ಘಟನಾ ಸ್ಥಳಕ್ಕೆ ತಲುಪಿದಾಗ, ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿತ್ತು. ಆರು ಜನರು ಒಳಗೆ ಸಿಕ್ಕಿಬಿದ್ದಿದ್ದಾರೆ ಎಂದು ಸ್ಥಳೀಯರು ನಮಗೆ ಮಾಹಿತಿ ನೀಡಿದರು. ನಮ್ಮ ಅಧಿಕಾರಿಗಳು ಒಳಗೆ ಹೋಗಿ ಆರು ಜನರ ಶವಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಎಂದು ಅಗ್ನಿಶಾಮಕ ಅಧಿಕಾರಿ ಮೋಹನ್ ಮುಂಗ್ಸೆ ತಿಳಿಸಿದ್ದಾರೆ. ಸದ್ಯ, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ” ಎಂದು ಅವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...