ಹುಬ್ಬಳ್ಳಿ : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ .
ಕಣ್ಣಿಗೆ ಖಾರದಪುಡಿ ಎರಚಿ ದುಷ್ಕರ್ಮಿಗಳು ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ವ್ಯಾಪಾರಿಯನ್ನು ಸ್ಯಾಮುಯೆಲ್ (38) ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿಯ ಮಂಟೂರು ನಿವಾಸಿ ಸ್ಯಾಮುಯೆಲ್ ಹಂದಿ ಮಾರಾಟ ಮಾಡುತ್ತಿದ್ದನು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.