ಬೆಂಗಳೂರು : 29 ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ .
ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೇಗೂರು ಬಳಿಯ ಅಪಾರ್ಟ್ಮೆಂಟ್ನಲ್ಲಿ ತಂದೆ-ತಾಯಿ ಜೊತೆ ವಾಸವಿದ್ದ ಬಾಲಕಿ 29ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬೆಳಗ್ಗೆ 5 ಗಂಟೆಗೆ ಎದ್ದು ಬಂದ ಬಾಲಕಿ ಮನೆಯ ಬಾಲ್ಕನಿಯಿಂದ ಹಾರಿದ್ದಾಳೆ. ಕೆಳಗೆ ಬಿದ್ದ ಬಾಲಕಿಯ ದೇಹ ಛಿದ್ರ ಛಿದ್ರವಾಗಿದೆ. ಬಾಲಕಿಯ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.