ಬೆಂಗಳೂರು : ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗಳಾದ ಘಟನೆ ಶ್ರೀರಾಂಪುರದ ಸ್ವತಂತ್ರ ಪಾಳ್ಯದಲ್ಲಿ ನಡೆದಿದೆ.
ಬೆಳಗ್ಗೆ ಎದ್ದು ಮನೆಯಲ್ಲಿ ಲೈಟ್ ಆನ್ ಮಾಡಿದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಪರಿಣಾಮ ನಂದಿನಿ ಎಂಬ ಮಹಿಳೆ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.