ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆಯೊಂದು ನಡೆದಿದ್ದು, ಜಮೀನಿಗೆ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನಗೊಂಡ ಘಟನೆ ಇಂದು ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಕಗ್ಗಲಿಪಾಳ್ಯದಲ್ಲಿ ಈ ಘಟನೆ ನಡೆದಿದೆ.ತಮ್ಮ ಜಮೀನಿಗೆ (ನೀಲಗಿರಿ ತೋಪು ) ಆಕಸ್ಮಾತ್ ಆಗಿ ಬೆಂಕಿ ಬಿದ್ದಿದ್ದು, ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಮನೆಯವರು ಬಂದು ನೋಡಿದಾಗ ಆ ವ್ಯಕ್ತಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದರು.
ಕಬ್ಬಾಳಯ್ಯ (65) ಎಂಬುವವರು ಮೃತಪಟ್ಟಿದ್ದು, ಮಾದನಾಯನಕಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.