ಬೆಳಗಾವಿ : ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನವಾದ ಘಟನೆ ಮಾಸುವ ಮುನ್ನವೇ ಘಟನೆ ಬೆಳಗಾವಿಯಲ್ಲಿ ಅಪ್ಪ-ಮಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32) ಹಾಗೂ ಮಗ ಪ್ರೀತಮ್ ಮಲ್ಲಿಕಾರ್ಜುನ ಪೂಜಾರಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ತೋಟದಲ್ಲಿ ಬೋರ್ ವೆಲ್ ಮೋಟಾರ್ ಆನ್ ಮಾಡುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಲ್ಲಿಕಾರ್ಜುನ ಮೃತಪಟ್ಟಿದ್ದಾರೆ, ಅಪ್ಪನನ್ನು ಉಳಿಸಲು ಹೋದ ಮಗ ಪ್ರೀತಮ್ ಕೂಡ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.