ಕೋಲಾರ : ಇಬ್ಬರು ಮಕ್ಕಳೊಂದಿಗೆ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾರಪುರದ ಸೀಗೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಾರಾಯಣ ಸ್ವಾಮಿ (40) ಪವನ್ (12) ನಿತಿನ್ (10) ಎಂದು ಗುರುತಿಸಲಾಗಿದೆ. ಶ್ರೀನಿವಾರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.