ಮೈಸೂರು : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಸ್ ನಿಂದ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ದೀನಾ ದಯಾಳ್ (21) ಎಂದು ಗುರುತಿಸಲಾಗಿದೆ. ಬಸ್ಸಿನ ಡೋರ್ ಸರಿಯಾಗಿ ಲಾಕ್ ಆಗಿರಲಿಲ್ಲ, ಈ ಹಿನ್ನೆಲೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಮೈಸೂರು ಜಿಲ್ಲೆಗೆ ತಮಿಳುನಾಡು ಮೂಲದ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆ ಬಂದಿತ್ತು, ಈ ವೇಳೆ ವಿದ್ಯಾರ್ಥಿಯೋರ್ವ ಬಾಗಿಲು ಬಳಿ ನಿಂತಿದ್ದು, ಬಸ್ಸಿನ ಡೋರ್ ಲಾಕ್ ಮಾಡದೇ ಇದ್ದಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.ಈ ಸಂಬಂಧ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.