ಹಾಸನ : ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನರಾಯಪಟ್ಟಣದ ಕೆರೆಬೀದಿಯಲ್ಲಿ ನಡೆದಿದೆ.
ಹೇಮಾವತಿ ಕಾಲುವೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪತಿ ಶ್ರೀನಿವಾಸ್ (43) , ಪತ್ನಿ ಶ್ವೇತಾ (36) , ಪುತ್ರಿ ನಾಗಶ್ರೀ (13) ಎಂದು ಗುರುತಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಶವವನ್ನು ಹೊರಕ್ಕೆ ತೆಗೆಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.