ತುಮಕೂರು : ತುಮಕೂರಿನಲ್ಲಿ ಘೋರ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಮೃತರನ್ನು ತಾಯಿ ಹಸೀನಾ(25) ಪುತ್ರಿಯರಾದ ಅಸೀಮಾ(8) ಅಲ್ಮಿಸಾ(3) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.