alex Certify BREAKING : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಇಲ್ಲ , ಸೆ.16 ರಿಂದ ದಂಡ ಫಿಕ್ಸ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಇಲ್ಲ , ಸೆ.16 ರಿಂದ ದಂಡ ಫಿಕ್ಸ್.!

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು ಸೆಪ್ಟೆಂಬರ್ 15ರ ವರೆಗೆ ಗಡುವು ನೀಡಲಾಗಿದೆ.

ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಯಾವುದೇ ಕಾರಣಕ್ಕೂ ಗಡುವು ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈಗಾಗಲೇ ಕಳೆದ 1 ವರ್ಷದಿಂದ ಕೂಡ ದಿನಾಂಕ ವಿಸ್ತರಣೆ ಮಾಡುತ್ತಲೇ ಬರುತ್ತಿದ್ದೇವೆ, ಮತ್ತೆ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬಹುದು. https://transport.karnataka.gov.in/english ಆನ್ಲೈನ್ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ.

ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ಸೆ.16ರಿಂದ ಎಲ್ಲಾ ಜಿಲ್ಲೆಗಳಲ್ಲೂ 500 ರೂ. ದಂಡ ಹಾಕುತ್ತೇವೆ. ಮೊದಲ ಸಲ 500 ರೂ. ದಂಡ ವಿಧಿಸಿದರೇ ಎರಡನೇ ಸಲಕ್ಕೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 1.49 ಕೋಟಿ ವಾಹನಗಳು ಇನ್ನೂ ಹೆಚ್ಎಸ್ಆರ್ಪಿ ಹಾಕಿಸಿಲ್ಲ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...