![](https://kannadadunia.com/wp-content/uploads/2023/03/93081-BJPFona.jpg)
ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಆರೋಪಿ ಬಂಧನ ಖಂಡಿಸಿ ಆರ್. ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯ ಶಹರಾ ಪೊಲೀಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಭಟನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ ಗಲಭೆ ಆರೋಪಿ ಬಂಧನ ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿ ಶಹರಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಶಾಸಕ ಮಹೇಶ್ ಟೆಂಗಿನ ಕಾಯಿ, ಅರವಿಂದ್ ಬೆಲ್ಲದ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಕರಸೇವಕರನ್ನು ಬೇಕಂತಲೇ ಬಂಧಿಸುತ್ತಿದೆ ಎಂದು ಆರೋಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.