ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆ ಜೈಲಿನಿಂದ ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆಯಾಗಿದ್ದಾರೆ.
ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 32 ವರ್ಷಗಳ ಬಳಿಕ ಶ್ರೀಕಾಂತ್ ಪೂಜಾರಿಯನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದರು. ಜ.5ರಂದು ಕೋರ್ಟ್ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಇಬ್ಬರ ಶ್ಯೂರಿಟಿ, 1 ಲಕ್ಷ ಮೌಲ್ಯದ 2 ಬಾಂಡ್ ಸೇರಿದಂತೆ ಇದೀಗ ಜಾಮೀನು ಷರತ್ತು ಪೂರೈಸಿರುವ ಹಿನ್ನೆಲೆಯಲ್ಲಿ ಶ್ರೀಕಾಂತ್ ಪೂಜಾರಿಯನ್ನು ಬಿಡುಗಡೆ ಮಾಡಲಾಗಿದೆ.
ರಾಮಜನ್ಮಭೂಮಿ ಹೋರಾಟ ಪ್ರಕರಣದ ಮೂರನೇ ಆರೋಪಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಹುಬಳ್ಳಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 1995 ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಕರಸೇವೆ ವೇಳೆ ಗಲಭೆ ಸಂಭವಿಸಿ ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ಸಂಬಂಧ 9 ಜನರ ವಿರುದ್ಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. 31 ವರ್ಷಗಳ ಬಳಿಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು.