ಬೆಂಗಳೂರು : ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಗಿರೀಶ್ ನನ್ನು 8 ದಿನ ಸಿಐಡಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಹಂತಕ ಗಿರೀಶ್ ನನ್ನು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಹಂತಕ ಗಿರೀಶ್ ನನ್ನು 8 ದಿನ ಸಿಐಡಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಗಾಯಗೊಂಡಿದ್ದ ಗಿರೀಶ್ ಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿದರು.
ಹುಬ್ಬಳ್ಳಿಯ ವೀರಾಪುರ ಓಣಿಗೆ ಬಂದ ಗಿರೀಶ್ ಸಾವಂತ್ ಅಂಜಲಿ ಅಂಬಿಗೇರ ಅವರ ಮನೆಗೆ ಹೋಗಿ ಆಕೆಯ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಹತ್ಯೆ ಮಾಡಿ ಓಡಿ ಹೋಗಿದ್ದ. ಈತ ಓಡಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.