ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆ ನಡೆದಿದ್ದು, 56 ಕ್ಕೂ ಹೆಚ್ಚು ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಶಾಸಕರು ಮಹತ್ವದ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹೌದು, ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಔತಣಕೂಟದ ನೆಪದಲ್ಲಿ ಮೂರು ಪಕ್ಷಗಳ 56 ಕ್ಕೂ ಹೆಚ್ಚು ಶಾಸಕರು ಒಟ್ಟುಗೂಡಿದ್ದು, ಲಂಚ್ ಜೊತೆ ಮಹತ್ವದ ಸಭೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶರಣಗೌಡ ಕಂದಕೂರು, ಶಿವಗಂಗಾ ಬಸವರಾಜ್ ಈ ಸಭೆ ಆಯೋಜನೆ ಮಾಡಿದ್ದರು ಎನ್ನಲಾಗಿದೆ.