ಬೆಂಗಳೂರು : ಪತ್ನಿ ಕೇಸ್ ಹಾಕಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರತ್ತಳ್ಳಿಯಲ್ಲಿ ನಡೆದಿದೆ.
ಅತುಲ್ ಸುಭಾಷ್ ಎಂಬುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತುಲ್ ಸುಭಾಷ್ ಉತ್ತರ ಪ್ರದೇಶ ಮೂಲದ ಯುವತಿಯನ್ನು ಮದುವೆಯಾಗಿದ್ದರು. ಗಂಡ-ಹೆಂಡತಿನ ನಡುವೆ ಆಗಾಗ ಜಗಳ ಕೂಡ ನಡೆಯುತ್ತಿತ್ತು. ಹೆಂಡತಿ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಿಸಿದ್ದರು. ಈ ವಿಚಾರಕ್ಕೆ ಸುಭಾಷ್ ಮನನೊಂದಿದ್ದರು ಎನ್ನಲಾಗಿದೆ.
ಎನ್ ಜಿ ಒ ಗ್ರೂಪ್ ಗೆ ವಾಟ್ಸಾಪ್ ನಲ್ಲಿ ಕೆಲವು ವಿಷಯಗಳನ್ನು ಹಂಚಿಕೊಂಡು ಸುಭಾಷ್ ಸೂಸೈಡ್ ಮಾಡಿಕೊಂಡಿದ್ದಾರೆ. ‘JUSTICE IS DUE’ ನನ್ನ ಕುಟುಂಬಕ್ಕೆ ಸಹಾಯ ಮಾಡಿ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
40 ಪುಟಗಳ ಡೆತ್ ನೋಟ್ ಬರೆದಿಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.