alex Certify BREAKING : ಪೊಲೀಸ್ ಠಾಣೆಯಲ್ಲೇ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಪತಿ : ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೊಲೀಸ್ ಠಾಣೆಯಲ್ಲೇ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಪತಿ : ಗಂಭೀರ ಗಾಯ

ಹಾಸನ : ಪತಿಯೋರ್ವ ಪೊಲೀಸ್ ಠಾಣೆಯಲ್ಲೇ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಪೊಲೀಸರ ಸಮಯ ಪ್ರಜ್ಷೆಯಿಂದ ದೊಡ್ಡ ದುರಂತವೊಂದು ತಪ್ಪಿದೆ. ಶಿಲ್ಪಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏನಿದು ಘಟನೆ

ಹಾಸನದ ಹರೀಶ್ ಹಾಗೂ ಶಿಲ್ಪಾ ಎಂಬ ಜೋಡಿ ಕಳೆದ 6 ವರ್ಷದ ಹಿಂದೆ ಮದುವೆಯಾಗಿದ್ದರು. ಕೆಲವು ವರ್ಷಗಳ ನಂತರ ಹರೀಶ್ ಪತ್ನಿಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಇದರಿಂದ ಬೇಸತ್ತ ಪತ್ನಿ ಶಿಲ್ಪ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ನಂತರ ವಿಚಾರಣೆ ನಡೆಸಲು ಹರೀಶ್ ನನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ನಂತರ ಹೆಂಡತಿ ಎದುರೇ ಗಂಡನನ್ನು ವಿಚಾರಣೆ ನಡೆಸುವಾಗ ಹೆಂಡತಿ ಮೇಲೆ ಸಿಟ್ಟಿಗೆದ್ದ ಪತಿ ಪತ್ನಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾನೆ. ಪರಿಣಾಮ ಪತ್ನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...