ನವದೆಹಲಿ: ಒಡಿಶಾ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಭಾರತವು ದೂರಗಾಮಿ ಹೈಪರ್ಸಾನಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.ಈ ಕ್ಷಿಪಣಿಯನ್ನು ಶನಿವಾರ ಪರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಸಿಂಗ್, ಇದು ಭಾರತವನ್ನು ಅಂತಹ ನಿರ್ಣಾಯಕ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಸಾಮರ್ಥ್ಯವನ್ನು ಹೊಂದಿರುವ ಆಯ್ದ ರಾಷ್ಟ್ರಗಳ ಗುಂಪಿನಲ್ಲಿ ಸೇರಿಸಿದೆ ಎಂದಿದ್ದಾರೆ.
ಒಡಿಶಾ ಕರಾವಳಿಯ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ದೂರಗಾಮಿ ಹೈಪರ್ಸಾನಿಕ್ ಕ್ಷಿಪಣಿಯ ಹಾರಾಟ ಪ್ರಯೋಗವನ್ನು ಯಶಸ್ವಿಯಾಗಿ ನಡೆಸುವ ಮೂಲಕ ಭಾರತವು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ” ಎಂದು ರಕ್ಷಣಾ ಸಚಿವರು ಹೇಳಿದರು.
#WATCH | DRDO successfully conducted a flight trial of its long-range hypersonic missile on November 16, 2024, from Dr APJ Abdul Kalam Island, off the coast of Odisha.
This hypersonic missile is designed to carry various payloads for ranges greater than 1500km for all the… pic.twitter.com/E7drLjbW8J
— ANI (@ANI) November 17, 2024