ಬೆಂಗಳುರು : ಯಾವುದೇ ತನಿಖೆ ಎದುರಿಸಿ ಕಾನೂನು ಹೋರಾಟ ನಡೆಸಲು ನಾನು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜನಪ್ರತಿನಿಧಿಗಳ ಕೋರ್ಟ್ ಆದೇಶದ ಬಳಿಕ ಸುದ್ದಿಗಾರರ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಪ್ರಕರಣದ ತನಿಖೆ ಎದುರಿಸಿ ಕಾನೂನು ಹೋರಾಟ ನಡೆಸಲು ನಾವು ಸಿದ್ದ, ಇದನ್ನು ನಾವು ಪುನರುಚ್ಚರಿಸುತ್ತೇವೆ. ಕೋರ್ಟ್ ತೀರ್ಪಿನ ಕಾಪಿ ಸಿಕ್ಕ ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ. ವಕೀಲರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಇಂದು ಕೇರಳಕ್ಕೆ ಹೋಗುತ್ತಿದ್ದೇನೆ, ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ.ಡಿಸೆಂಬರ್ 24 ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಮೈಸೂರು ಲೋಕಾಯುಕ್ತ ಎಸ್ ಪಿಗೆ ಸೂಚನೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.ವಾದ ವಿವಾದ ಆಲಿಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಈ ಆದೇಶ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ. ಒಟ್ಟಿನಲ್ಲಿ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ತ ಶುರುವಾಗಿದೆ.