ಬೆಂಗಳೂರು : ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಇದನ್ನು ಮೊದಲೇ ನಿರೀಕ್ಷೆ ಮಾಡಿದ್ದೆ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರು ಶೋಕಾಸ್ ಕೊಟ್ಟ ದಿನವೇ ನಾನು ಇದನ್ನು ನಿರೀಕ್ಷೆ ಮಾಡಿದ್ದೆ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹೈಕಮಾಂಡ್. ಸಚಿವರು. ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ ಎಂದರು.
ಕರ್ನಾಟಕ ಸರ್ಕಾರವನ್ನು ಗುರಿಯಾಗಿಸಲು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಕುತಂತ್ರ ನಡೆಸಿದೆ. ನನ್ನ ಬೆಂಬಲಕ್ಕೆ ಹೈಕಮಾಂಡ್ ನಿಂತಿದೆ. ನಾನು ಯಾವುದಕ್ಕೂ ಹೆದರಲ್ಲ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ. ದೊಡ್ಡ ಷಡ್ಯಂತ್ರದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಸಿಕ್ಕಿದೆ. ಈ ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ.