ಮೈಸೂರು : ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ . ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ತಪ್ಪು ಮಾಡಿದರೆ ಮಾತ್ರ ರಾಜೀನಾಮೆ ಕೊಡೋದು..? ನಾನು ತಪ್ಪು ಮಾಡಿಲ್ಲ ಎಂದರೆ ಯಾಕೆ ಕೊಡಬೇಕು..? ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಹಾಗಾಗಿ ರಾಜಕೀಯವಾಗಿ ನನ್ನ ವಿರುದ್ಧ ಪ್ರಕರಣ ದಾಖಲಿಸಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ತಪ್ಪು ಮಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ..? ಕುಮಾರಸ್ವಾಮಿ ಯಾರ ಸಂಪುಟದಲ್ಲಿ ಮಂತ್ರಿಯಾಗಿದ್ದಾರೆ..? ಎಂದು ವಾಗ್ಧಾಳಿ ನಡೆಸಿದರು.
ನಾನು ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮುಂದುವರೆಸುತ್ತೇನೆ. ಬಿಜೆಪಿಯವರಿಗೆ ನನ್ನ ಕಂಡರೆ ಭಯ ಅದಕ್ಕಾಗಿ ಈ ಕುತಂತ್ರ ಮಾಡಿದ್ದಾರೆ, ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದರು.