ಬೆಂಗಳೂರು : ನಾನು ಇನ್ನೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಬಿ. ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಈ ಬೆನ್ನಲ್ಲೇ ನಾನು ಇನ್ನೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಇಂದು ಸಂಜೆ 4:30 ಕ್ಕೆ ನಾನು ಸುದ್ದಿಗೋಷ್ಟಿ ಕರೆದಿದ್ದೇನೆ, ಅದರಲ್ಲಿ ಎಲ್ಲವನ್ನೂ ಎಳೆ ಎಳೆಯಾಗಿ ಹೇಳುತ್ತೇನೆ ಎಂದು ನಾಗೇಂದ್ರ ಹೇಳಿದರು.