ಲಖ್ನೋ: ಮತ್ತೊಬ್ಬ ಸುಗಂಧ ದ್ರವ್ಯ ವ್ಯಾಪಾರಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದಲ್ಲಿರುವ ಕನೌಜ್ ನಲ್ಲಿರುವ ಸಮಾಜವಾದಿ ಪಕ್ಷದ ಶಾಸಕ ಪುಷ್ಪರಾಜ್ ಜೈನ್ ಮನೆಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ಮೂಲಕ ಮತ್ತೊಬ್ಬ ಸುಗಂಧದ್ರವ್ಯ ವ್ಯಾಪಾರಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ಪಿಯುಶ್ ಜೈನ್ ನಿವಾಸದ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ ಸಂದರ್ಭದಲ್ಲಿ 250 ಕೋಟಿಗೂ ಅಧಿಕ ನಗದು ಮತ್ತು 10 ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿತ್ತು. ಈ ದಾಳಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.
ಕಾನ್ಪುರ ಮೂಲದ ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್ ಜೈನ್ ಅವರನ್ನು ಬಂಧಿಸಿದ ನಂತರ, ಮುಂಬರುವ 2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಸಮಾಜವಾದಿ ಅತ್ತಾರ್(ಸುಗಂಧ ದ್ರವ್ಯ) ಸಿದ್ಧಪಡಿಸಿದ ಸಮಾಜವಾದಿ ಪಕ್ಷದ ಎಂಎಲ್‌ಸಿ ಪುಷ್ಪರಾಜ್ ಜೈನ್ ಎಂದು ಕೆಲವರು ತಪ್ಪಾಗಿ ಭಾವಿಸಿದ್ದರು.