ಬೆಂಗಳೂರು : ಮುಂದಿನ ಐದು ವರ್ಷ ನಾನೇ ಸಿಎಂ ಆಗಿ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬಹಳ ಕುತೂಹಲಕ್ಕೆ ಕಾರಣವಾಗಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮತ್ತೆ ನಾವೇ ಗೆದ್ದು ಬರುತ್ತೇವೆ, ಐದು ವರ್ಷ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆ ನೀವೇ ಸಿಎಂ ಆಗಿ ಇರುತ್ತೀರಾ ಎಂಬ ಬಿಜೆಪಿಗರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಹೌದು, ಮತ್ತೆ 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.