
ಚಿತ್ರದುರ್ಗ : ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ದಾವಣಗೆರೆ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ. ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದು ಹೇಳಿದ್ದಾರೆ.
ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಆದರೆ ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ದರೆ ಎರಡು ಪಕ್ಷಗಳ ಮಧ್ಯೆ ಸಂಘರ್ಷವಾಗಲಿದೆ ಎಂದು ಹೇಳುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.