ನವದೆಹಲಿ : ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್ ಅವರನ್ನು ನೇಮಕ ಮಾಡಲಾಗಿದೆ.
ಆಂಧ್ರಪ್ರದೇಶ ಕೇಡರ್ ನ 1983ರ ಬ್ಯಾಚ್ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ದ್ರೌಪದಿ ಮುರ್ಮು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ಸೋನಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಮುರ್ಮು ಅವರು ಸಂವಿಧಾನದ 316 ನೇ ವಿಧಿಯ ಷರತ್ತು (1 ಎ) ಅಡಿಯಲ್ಲಿ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಅಥವಾ ಮುಂದಿನ ಆದೇಶದವರೆಗೆ ಯುಪಿಎಸ್ಸಿ ಅಧ್ಯಕ್ಷರ ಕರ್ತವ್ಯಗಳನ್ನು ನಿರ್ವಹಿಸಲು ಪ್ರೀತಿ ಸೂದನ್ ಅವರನ್ನು ಯುಪಿಎಸ್ಸಿ ಅಧ್ಯಕ್ಷರಾಗಿ ನೇಮಿಸಿದರು.
“ಭಾರತದ ಸಂವಿಧಾನದ 316 (2) ನೇ ವಿಧಿಯ ಅಡಿಯಲ್ಲಿ ಜುಲೈ 31 ರಿಂದ ಜಾರಿಗೆ ಬರುವಂತೆ ಯುಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಡಾ.ಮನೋಜ್ ಸೋನಿ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ ಎಂದು ತಿಳಿಸಲಾಗಿದೆ” ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.