ಹುಬ್ಬಳ್ಳಿ : ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕಾಂಗ್ರೆಸ್ ಗೆ ಕರೆ ತರುತ್ತೇನೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೈಕಮಾಂಡ್ ಸೂಚಿಸಿದರೆ ಯತ್ನಾಳ್’ರನ್ನು ಕಾಂಗ್ರೆಸ್ ತರಲು ಸಿದ್ದನಿದ್ದೇನೆ. ಅವರು ಕಾಂಗ್ರೆಸ್ ಬಂದರೆ ಸ್ವಾಗತ. ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಯತ್ನಾಳ್ ರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರುತ್ತೇನೆ ಎಂದು ಹೇಳಿದರು.
ಇತ್ತೀಚೆಗಷ್ಟೇ ಬಿಜೆಪಿಯಿಂದ ಉಚ್ಚಾಟನೆಗೊಳಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿದ್ದಾರೆ. ಯತ್ನಾಳ್ ಅವರನ್ನು ಮಾತನಾಡಿಸಲು ಮಾಧ್ಯಮ ಪ್ರತಿನಿಧಿಗಳು ಅತಿಥಿ ಗೃಹದ ಆವರಣ ಪ್ರವೇಶಿಸಲು ಪ್ರಯತ್ನಿಸಿದಾಗ, ಭದ್ರತಾ ಸಿಬ್ಬಂದಿ ಅವರನ್ನು ತಡೆದು ಹೊರಗೆ ಕಳುಹಿಸಿದ್ದಾರೆ. ದೆಹಲಿಯಿಂದ ವಿಮಾನದಲ್ಲಿ ಬಂದಿಳಿದ ಯತ್ನಾಳ್ ಹೈದರಾಬಾದ್ನಿಂದ ಕಾರಿನಲ್ಲಿ ಚಿಂಚೋಳಿಗೆ ಬಂದಿದ್ದು, ಅತಿಥಿ ಗೃಹದಲ್ಲಿ ತಂಗಿದ್ದಾರೆ. ಅವರೊಂದಿಗೆ ಪುತ್ರ ರಾಮನಗೌಡ ಪಾಟೀಲ್ ಮತ್ತು ಕಾರ್ಖಾನೆಯ ನಿರ್ದೇಶಕರು ಇದ್ದರು.