alex Certify BREAKING : ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ ; ‘SIT’ ವಿಚಾರಣೆಗೆ ಹಾಜರಾದ ಮಾಜಿ ಸಚಿವ ನಾಗೇಂದ್ರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ ; ‘SIT’ ವಿಚಾರಣೆಗೆ ಹಾಜರಾದ ಮಾಜಿ ಸಚಿವ ನಾಗೇಂದ್ರ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿತ್ತು.

ಈ ಹಿನ್ನೆಲೆ ಮಾಜಿ ಸಚಿವ ಬಿ.ನಾಗೇಂದ್ರ ಅವರು ಇಂದು ಬೆಂಗಳೂರಿನ ಎಸ್ ಐ ಟಿ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್ ಐ ಟಿ ಅಧಿಕಾರಿಗಳು ನಾಗೇಂದ್ರ ಅವರಿಂದ ಮಹತ್ವದ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಾಗೂ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು, ತನಿಖೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.

ವಾಲ್ಮೀಕಿ ನಿಗದಲ್ಲಿ 185 ಕೋಟಿ ಅಕ್ರಮ ನಡೆದಿದೆ ಎಂದು ನಿಗಮದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ತನಿಖೆಗೆ ವಹಿಸಿದೆ. ಇನ್ನೊಂದೆಡೆ ಸಿಬಿಐ ಹಾಗೂ ಇಡಿ ಕೂಡ ಪ್ರತ್ಯೇಕ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿವೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...