ಬೆಂಗಳೂರು : ಅಕ್ರಮ ಚಿನ್ನಸಾಗಾಟ ಪ್ರಕರಣದಲ್ಲಿ ನಟಿ ರನ್ಯಾರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಾದ ಆಲಿಸಿದ ಆರ್ಥಿಕ ವಿಶೇಷ ಕೋರ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿದೆ.
ರನ್ಯಾರಾವ್ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದ್ದು, ವಾದ ಆಲಿಸಿದ ಕೋರ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು..ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.